ಮೈಸೂರು: 9 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಅಪರಾಧಿ ಕಾರ್ತಿಕ್ಗೆ ಗಲ್ಲು ಶಿಕ್ಷೆ
ಕಳೆದ ವರ್ಷ ಮೈಸೂರು ದಸರಾ ವೇಳೆ ಬಲೂನ್ ಮಾರಾಟ ಮಾಡುತ್ತಿದ್ದ 9 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣದ ಅಪರಾಧಿ ಕಾರ್ತಿಕ್ಗೆ (32) ಮೈಸೂರಿನ ತ್ವರಿತಗತಿ ನ್ಯಾಯಾಲಯ ಗಲ್ಲು...

ಮೈಸೂರು ದಸರಾ ವಸ್ತುಪ್ರದರ್ಶನದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದ 9 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಕಾರ್ತಿಕ್ ಎಂಬಾತನಿಗೆ ಮೈಸೂರಿನ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಕಳೆದ ವರ್ಷ ನಡೆದ ಈ ಘಟನೆಯ ಬಳಿಕ ನಜರಬಾದ್ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದರು. ಎಫ್ಟಿಎಸ್ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಅನಿಲ್ ಪಿ. ವಘಾಢೆ ಅವರು ಪ್ರಕರಣದ ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಜಯಂತಿ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.




