ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಮಂಗಳೂರು: ಪಾದ್ರಿ ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲು

ಮಂಗಳೂರಿನ ವೆಲೆನ್ಸಿಯಾ ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ 14 ವರ್ಷದ ಬಾಲಕನ ಪ್ರಕರಣದಲ್ಲಿ ಜಾಮೀ...

· ದಕ್ಷಿಣ ಕನ್ನಡ
ಮಂಗಳೂರು ಪಾದ್ರಿ ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್; ಬಿಷಪ್ ವಿರುದ್ಧವೂ ಗಂಭೀರ ಆರೋಪ
ಹಂಚಿಕೊಳ್ಳಿ:

ಮಂಗಳೂರಿನ ಚರ್ಚ್ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ವಿರುದ್ಧ 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕಲು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪೌಲ್ ಸಲ್ಡಾನ ಪ್ರಯತ್ನಿಸಿದ್ದಾರೆ ಎಂದು ಒಡನಾಡಿ ಸೇವಾ ಸಂಸ್ಥೆ ಗಂಭೀರ ಆರೋಪ ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಮತ್ತು ಬಿಷಪ್ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಸ್ಥಾಪಕ ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ. ಸದ್ಯ ಪ್ರಕರಣದ ತನಿಖೆಯನ್ನು ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ.

ಹಂಚಿಕೊಳ್ಳಿ: