ಮಣಿಪಾಲ: ಎಂಐಟಿ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಮಣಿಪಾಲದ ಎಂಐಟಿ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಬಿ.ಟೆಕ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸ್ಟೆಲ್ ವಾರ್ಡನ್ ಡ...

ಮಣಿಪಾಲದ ಎಂಐಟಿ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಬಿ.ಟೆಕ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸ್ಟೆಲ್ ವಾರ್ಡನ್ ಡಾ. ಅಲಪಾಟಿ ವರಲಕ್ಷ್ಮಿ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ಮೃತ ವಿದ್ಯಾರ್ಥಿನಿ ಶ್ರೀಯಾ ಪರ್ಗಿ ಅವರು ಹಾಸ್ಟೆಲ್‌ನ 4ನೇ ಮಹಡಿಯ ರೂಮ್ ನಂ 434ರಲ್ಲಿ ವಾಸ್ತವ್ಯವಿದ್ದರು. ನವೆಂಬರ್ 10, 2026ರ ರಾತ್ರಿ 9.39 ಗಂಟೆಗೆ ವಿದ್ಯಾರ್ಥಿನಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಿ ತನ್ನ ಕೊಠಡಿಗೆ ತೆರಳಿದ್ದರು ಎಂದು ತಿಳಿಸಲಾಗಿದೆ.
ನವೆಂಬರ್ 11, 2026ರಂದು ವಿದ್ಯಾರ್ಥಿನಿ ಮೊಬೈಲ್ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ ಮತ್ತು ಕೊಠಡಿಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಈ ಬಗ್ಗೆ ಅನುಮಾನಗೊಂಡ ಕೇರ್ ಟೇಕರ್ ಶಾಲಿನಿ ಶೆಟ್ಟಿ ಅವರು ಸ್ಪೇರ್ ಕೀ ಬಳಸಿ ಬಾಗಿಲು ತೆರೆಯಲು ಪ್ರಯತ್ನಿಸಿದರು, ಆದರೆ ಸಾಧ್ಯವಾಗಲಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ.
ನಂತರ ಕ್ಯಾಂಪಸ್ ಪೆಟ್ರೋಲ್ ಸಿಬ್ಬಂದಿಯನ್ನು ಕರೆಸಿ ಬಾಗಿಲಿನ ಚಿಲಕವನ್ನು ತೆಗೆಸಿ ಒಳಗೆ ಹೋಗಿ ನೋಡಿದಾಗ, ಶ್ರೀಯಾ ಪರ್ಗಿ ಅವರು ಸೀರೆಯಿಂದ ಫ್ಯಾನ್‌ನ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 57/2026, ಕಲಂ 194 ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.



