ಮರ್ಚೆಂಟ್ ನೇವಿ ಅಧಿಕಾರಿ ಹತ್ಯೆ: ಪತ್ನಿ ಮುಸ್ಕಾನ್ ರಸ್ತೋಗಿ ಹಾಗೂ ಪ್ರಿಯಕರ ಸಾಹಿಲ್ ಶುಕ್ಲಾಗೆ ಮರಣದಂಡನೆ
ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದ ಕುಖ್ಯಾತ 'ಬ್ಲೂ ಡ್ರಮ್' ಕೊಲೆ ಪ್ರಕರಣದಲ್ಲಿ ಪತಿಯನ್ನು ಹತ್ಯೆಗೈದ ಪತ್ನಿ ಮುಸ್ಕಾನ್ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರ ಹತ್ಯೆ ಪ್ರಕರಣದಲ್ಲಿ ಮೀರತ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪತ್ನಿ ಮುಸ್ಕಾನ್ ರಸ್ತೋಗಿ ಹಾಗೂ ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಪತಿಯನ್ನು ಕೊಲೆ ಮಾಡಿ ದೇಹದ ಭಾಗಗಳನ್ನು ಬ್ಲೂ ಡ್ರಮ್ನಲ್ಲಿ ಸಿಮೆಂಟ್ ತುಂಬಿ ಅಡಗಿಸಿಟ್ಟಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಧೀಶ ಅರವಿಂದ್ ಕುಮಾರ್ ಮಿಶ್ರಾ ಈ ತೀರ್ಪು ನೀಡಿದ್ದಾರೆ. 13 ತಿಂಗಳ ಸುದೀರ್ಘ ವಿಚಾರಣೆಯ ನಂತರ ಈ ಐತಿಹಾಸಿಕ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯದ ಆವರಣದಲ್ಲಿ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.



