ಪಾಂಡವಪುರ: ಕೊಲೆ ಆರೋಪದಲ್ಲಿ 2.5 ವರ್ಷ ಜೈಲು ಶಿಕ್ಷೆ ಅನುಭವಿಸಿದ ವ್ಯಕ್ತಿ ನಿರಪರಾಧಿ
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಂಜು ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾರೆ. ಆಕೆಯ ಕೊಲೆ ಆರೋಪದ ಮೇಲೆ ರಾಜೇಶ್ ಎಂಬಾತ ಎರಡೂವರೆ ವರ್ಷ ಜೈಲುವಾಸ ಅನುಭವಿಸಿದ್ದ....

ಪಾಂಡವಪುರದ ಮಂಜು ಎಂಬ ಮಹಿಳೆ ನಾಪತ್ತೆಯಾದ ಪ್ರಕರಣದಲ್ಲಿ ರಾಜೇಶ್ ಎಂಬುವವರನ್ನು ಕೊಲೆ ಆರೋಪದಡಿ ಪೊಲೀಸರು ಬಂಧಿಸಿದ್ದರು. ಪೊಲೀಸ್ ಇನ್ಸ್ಪೆಕ್ಟರ್ ಪ್ರಭಾಕರ್ ಅವರ ತನಿಖೆಯ ವೇಳೆ ಚಿತ್ರಹಿಂಸೆ ನೀಡಿ ಬಲವಂತವಾಗಿ ತಪ್ಪೊಪ್ಪಿಗೆ ಪಡೆದಿದ್ದರಿಂದ ರಾಜೇಶ್ ಎರಡೂವರೆ ವರ್ಷ ಜೈಲುವಾಸ ಅನುಭವಿಸುವಂತಾಯಿತು. ಆದರೆ ಇತ್ತೀಚೆಗೆ ನಾಗಮಂಗಲದಲ್ಲಿ ಮಂಜು ಜೀವಂತವಾಗಿ ಪತ್ತೆಯಾಗಿದ್ದು ತಾನು ರಾಜೇಶ್ಗೆ ಅಪರಿಚಿತ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ಪೊಲೀಸ್ ತನಿಖೆಯ ವೈಫಲ್ಯ ಮತ್ತು ಅಮಾಯಕನಿಗೆ ಆದ ಅನ್ಯಾಯದ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ.



