ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಸೀವನ್ ಜಿಲ್ಲೆಯ ಅಲಂಪುರ್ ಗ್ರಾಮದಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ

ಬಿಹಾರದ ಸೀವನ್ ಜಿಲ್ಲೆಯಲ್ಲಿರುವ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವಶೇಷಗಳ...

ಬಿಹಾರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 4 ಜನ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಹಂಚಿಕೊಳ್ಳಿ:

ಬಿಹಾರದ ಸೀವನ್ ಜಿಲ್ಲೆಯ ಜಾಮೊ ಪೊಲೀಸ್ ಠಾಣಾ ವ್ಯಾಪ್ತಿಯ ಅಲಂಪುರ್ ಗ್ರಾಮದಲ್ಲಿ ನಡೆದ ಪಟಾಕಿ ಸ್ಫೋಟದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಮ್ರುದ್ದೀನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದಾಗ ಸಂಜೆ 5.20ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಘಟನೆಯ ಸಮಯದಲ್ಲಿ ಮನೆಯಲ್ಲಿದ್ದ ಏಳು ಮಂದಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಉಳಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿ ಆಗಾಗ ಸಣ್ಣ ಸ್ಫೋಟಗಳು ಸಂಭವಿಸುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆಯಾಗಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಜೆಸಿಬಿ ಬಳಸಿ ಅವಶೇಷ ತೆರವುಗೊಳಿಸುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಹಂಚಿಕೊಳ್ಳಿ: