ಮುಖ್ಯ ವಿಷಯಕ್ಕೆ ಹೋಗಿ
The Karnataka Today
6 Oct
Latest
ಅಪರಾಧ

ಉಳ್ಳಾಲ: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಮೂವರು ಯುವಕರ ವಿರುದ್ಧ ಪ್ರಕರಣ…!!

ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದ ಮೇಲೆ ಮೂವರು ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬೆಳಿಗ್ಗ...

· ದಕ್ಷಿಣ ಕನ್ನಡ
ಉಳ್ಳಾಲ: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಮೂವರು ಯುವಕರ ವಿರುದ್ಧ ಪ್ರಕರಣ…!!
ಹಂಚಿಕೊಳ್ಳಿ:

ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದ ಮೇಲೆ ಮೂವರು ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಳಿಗ್ಗೆ 9.30ರ ಸುಮಾರಿಗೆ ಉಳ್ಳಾಲ ತಾಲೂಕು ಮುನ್ನೂರು ಗ್ರಾಮದ ಜಲಾಲ್‌ಭಾಗ್ ಬಳಿ ಆರೋಪಿಗಳು ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ಉಳ್ಳಾಲ ಠಾಣೆಯ ಪಿಎಸ್‌ಐ ಸಂತೋಷ್ ಕುಮಾರ್ ಡಿ. ಅವರು ಆರೋಪಿಗಳಾದ ಕೇರಳ ಮೂಲದ ಮೊಹಮ್ಮದ್ ಜಾಸಿಮ್ (19), ಅದ್ನಾನ್ ಮೊಹಮ್ಮದ್ (19) ಹಾಗೂ ಅಮೀರ್ ಮೊಹಮ್ಮದ್ (19) ಅವರನ್ನು ವಶಕ್ಕೆ ಪಡೆದು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಮೂವರು ಮಾದಕ ವಸ್ತು ಸೇವಿಸಿರುವುದಾಗಿ ವೈದ್ಯಾಧಿಕಾರಿಗಳು ಬಯೋಕೆಮಿಸ್ಟ್ರಿ ವರದಿ ಮೂಲಕ ದೃಢಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಹಂಚಿಕೊಳ್ಳಿ: