ವೇಣೂರು: ಅಂಡಿಂಜೆಯಲ್ಲಿ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ, ನಾಲ್ವರ ಬಂಧನ
ವೇಣೂರಿನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿರುವ ಘಟನೆ ನಡೆದಿದೆ. ದೂರಿನ ಪ್ರಕಾರ, 2026ರ ಅಕ್ಟೋಬರ್ 18...

ವೇಣೂರಿನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿರುವ ಘಟನೆ ನಡೆದಿದೆ.
ದೂರಿನ ಪ್ರಕಾರ, 2026ರ ಅಕ್ಟೋಬರ್ 18ರಂದು ಮಧ್ಯಾಹ್ನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಪಿಎಸ್ಐ ಅಕ್ಷಯ ಡವಗಿ ಅವರಿಗೆ ಮಾಹಿತಿ ದೊರೆತಿದೆ.
ಮಾಹಿತಿಯ ಮೇರೆಗೆ ಪಿಎಸ್ಐ ಅವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಅಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿರುವುದು ದೃಢಪಟ್ಟಿದೆ ಎಂದು ತಿಳಿಸಲಾಗಿದೆ.
ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಆ ಪೈಕಿ ಮೋಹನ ಗೌಡ, ದಿನೇಶ್, ಪ್ರಶಾಂತ ಹಾಗೂ ಧೀರಜ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಪೊಲೀಸರು ಸ್ಥಳದಿಂದ 7 ಅಂಕದ ಕೋಳಿಗಳು, 3 ದ್ವಿಚಕ್ರ ವಾಹನಗಳು ಹಾಗೂ 1 ಆಟೋರಿಕ್ಷಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 72-2026, ಕಲಂ 87, 93 ಕೆಪಿ ಆಕ್ಟ್, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ 3, 11(1)(m)(ii), 11(1)(n) ಹಾಗೂ ಬಿಎನ್ಎಸ್ 2023ರ ಕಲಂ 112ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
(ಕಾ ಮತ್ತು ಸು) ವೇಣೂರು ಪೊಲೀಸ್ ಠಾಣೆ



