ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಆಂಧ್ರ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ ಚಂಡಮಾರುತ: ಕರ್ನಾಟಕಕ್ಕೂ ಮಳೆಯ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಚಂಡಮಾರುತದ ಎಚ್ಚರಿಕೆ ನೀಡಿದೆ. ಅಕ್ಟೋಬರ್ 28ರಂದು ಇದು ಪೂರ್ವ ಕರಾವಳ...

ಆಂಧ್ರ, ಒಡಿಶಾದಲ್ಲಿ ಅ. 28ಕ್ಕೆ ಚಂಡಮಾರುತ ಅಬ್ಬರ; ಕರ್ನಾಟಕದಲ್ಲೂ ಬಿರುಗಾಳಿ ಸಹಿತ ಮಳೆಯ ಅಲರ್ಟ್
ಹಂಚಿಕೊಳ್ಳಿ:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಕ್ಟೋಬರ್ 28ರಂದು ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿಗೆ ಚಂಡಮಾರುತವಾಗಿ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಎನ್‌ಡಿಆರ್‌ಎಫ್ ಪಡೆಗಳನ್ನು ಸನ್ನದ್ಧಗೊಳಿಸಲಾಗಿದೆ. ಅಕ್ಟೋಬರ್ 26ರಂದು ತಮಿಳುನಾಡು ಮತ್ತು ಪುದುಚೆರಿಯಲ್ಲಿ ಮಳೆಯಾಗಲಿದ್ದು, ಕರ್ನಾಟಕದ ಒಳನಾಡು ಭಾಗಗಳಲ್ಲಿ ಅಕ್ಟೋಬರ್ 27 ಮತ್ತು 28ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಂಚಿಕೊಳ್ಳಿ: