ಅಹಮದಾಬಾದ್: ಪ್ರಧಾನಿ ಹೆಸರಿನಲ್ಲಿ ₹8,000 ನೆರವಿನ ನಕಲಿ ಸಂದೇಶದ ಬಗ್ಗೆ ಪೊಲೀಸ್ ಎಚ್ಚರಿಕೆ
ಅಹಮದಾಬಾದ್: ದೀಪಾವಳಿಗೆ ನಗದು ನೆರವಿನ ರೂಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ₹8,000 ನೀಡುತ್ತಿದ್ದಾರೆ ಎನ್ನುವುದು ಸುಳ್ಳು ಸುದ್ದಿ. ಇಂತಹ ಸಂದೇಶಗಳೊಂದಿಗೆ ಬರುವ ಲಿಂಕ್‌ಗಳನ್ನು ಕ್ಲಿಕ್ ಮಾಡುವುದರಿಂದ ವಾಟ್ಸಪ್...

ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬದ ಪ್ರಯುಕ್ತ ₹8,000 ನಗದು ನೆರವು ನೀಡುತ್ತಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸಂದೇಶ ಸುಳ್ಳು ಎಂದು ಗುಜರಾತ್ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇಂತಹ ವಂಚನೆಯ ಲಿಂಕ್‌ಗಳನ್ನು ಕ್ಲಿಕ್ ಮಾಡುವುದರಿಂದ ವಾಟ್ಸಾಪ್ ಖಾತೆಗಳು ಹ್ಯಾಕ್ ಆಗುವ ಮತ್ತು ಬ್ಯಾಂಕಿಂಗ್ ಮಾಹಿತಿಗಳು ಸೋರಿಕೆಯಾಗುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸೈಬರ್ ವಂಚಕರು ನಕಲಿ ವೆಬ್‌ಸೈಟ್‌ಗಳ ಮೂಲಕ ಬಳಕೆದಾರರ ಖಾಸಗಿ ಮಾಹಿತಿಯನ್ನು ಕದಿಯುತ್ತಿದ್ದು, ಯಾವುದೇ ಆಮಿಷಗಳಿಗೆ ಒಳಗಾಗದಂತೆ ಸೂಚಿಸಲಾಗಿದೆ. ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ಮಾತ್ರವೇ ಪರಿಶೀಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.




