ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಅಮೆರಿಕ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಭಾರತದಲ್ಲೂ ಬದಲಾವಣೆ ಕಾದಿದೆ ಎಂದ ಶಮಾ ಮೊಹಮದ್

ನವದೆಹಲಿ: ಅಮೆರಿಕದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಗೆಲುವು ಕಂಡ ಬೆನ್ನಲ್ಲೇ ಇದೇ ವಿಚಾರವಾಗಿ ಮೋದಿ ಸರ್ಕಾರಕ್ಕೆ ತಿವಿದಿರುವ ಕಾಂಗ್ರೆಸ್ ನಾಯಕಿ ಶಮಾ ಮೊಹಮದ್, ಭಾರತದಲ್ಲೂ ಇದೇ ಮರುಕಳಿಸುತ್ತದೆ...

ಅಮೆರಿಕ ಮಧ್ಯಂತರ ಚುನಾವಣೆ ಫಲಿತಾಂಶ: 'Mr. ಪ್ರಧಾನಿ ಮೋದಿ ಎಚ್ಚರ.. ಭಾರತದಲ್ಲೂ ಇದೇ ಮರುಕಳಿಸುತ್ತೆ': ಕಾಂಗ್ರೆಸ್ ನಾಯಕಿ Shama Mohamed
ಹಂಚಿಕೊಳ್ಳಿ:

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷವು ಪಡೆದಿರುವ ಜಯವು ಭಾರತದ ರಾಜಕೀಯ ಪರಿಸ್ಥಿತಿಗೂ ಅನ್ವಯವಾಗಲಿದೆ ಎಂದು ಕಾಂಗ್ರೆಸ್ ವಕ್ತಾರೆ ಶಮಾ ಮೊಹಮದ್ ಭವಿಷ್ಯ ನುಡಿದಿದ್ದಾರೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವವರು ಹಾಗೂ ಆರ್ಥಿಕ ವಿಚಾರಗಳಲ್ಲಿ ಸುಳ್ಳು ಹೇಳುವವರನ್ನು ಮತದಾರರು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕಾನ್ಸಾಸ್ ರಾಜ್ಯದಲ್ಲಿ 1932ರ ನಂತರ ಇದೇ ಮೊದಲ ಬಾರಿಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿರುವುದು ಗಮನಾರ್ಹವಾಗಿದೆ. ಟೆಕ್ಸಾಸ್ ಮತ್ತು ಅಯೋವಾ ಸೇರಿದಂತೆ ಹಲವು ಕಡೆಗಳಲ್ಲಿ ಪಕ್ಷವು ಉತ್ತಮ ಸಾಧನೆ ತೋರಿರುವುದನ್ನು ಉಲ್ಲೇಖಿಸಿ, ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಹಂಚಿಕೊಳ್ಳಿ: