ಅರುಣಾಚಲ ಪ್ರದೇಶ ಗಡಿಯಲ್ಲಿ ಚೀನಾ ಅತಿಕ್ರಮಣ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರತೀಯ ಮತ್ತು ಚೀನಾ ಸೇನೆಗಳ ನಡುವೆ ನಿರಂತರ ಮುಖಾಮುಖಿ ನಡೆಯುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದೆ. ಗ...

ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಚೀನಾದ ಪಿಎಲ್ಎ ನಡುವೆ ನಿರಂತರ ಮುಖಾಮುಖಿ ನಡೆಯುತ್ತಿದೆ ಎಂಬ ಐಟಿಬಿಪಿ ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತೆ ಮತ್ತು ಗಡಿ ಪರಿಸ್ಥಿತಿಯ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಗಲ್ವಾನ್ ಸಂಘರ್ಷದ ಬಳಿಕ ಚೀನಾದಿಂದ ಭಾರತಕ್ಕೆ ಆಗುವ ಆಮದು ಶೇ.102ರಷ್ಟು ಹೆಚ್ಚಾಗಿದ್ದು, ವ್ಯಾಪಾರ ಕೊರತೆಯೂ ಭಾರಿ ಏರಿಕೆಯಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಜೈರಾಮ್ ರಮೇಶ್, ಪವನ್ ಖೇರಾ ಮತ್ತು ಜೇಬಿ ಮಾಥರ್ ಸೇರಿದಂತೆ ಹಲವು ನಾಯಕರು ಸರ್ಕಾರದ ಮೌನವನ್ನು ಪ್ರಶ್ನಿಸಿದ್ದು, ಗಡಿಯಲ್ಲಿನ ವಾಸ್ತವ ಸ್ಥಿತಿಯನ್ನು ದೇಶದ ಮುಂದಿಡಬೇಕೆಂದು ಆಗ್ರಹಿಸಿದ್ದಾರೆ.




