3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ
ಕೊಲ್ಕತ್ತಾ: ಪಶ್ಚಿಮ ಬಂಗಾಳದಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿ ಮಾಡಲು ಯತ್ನಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ (ಮಮತಾ ಬಣ) ಆರೋಪಿಸಿದೆ. ಮಾದಕ ವ್ಯ...

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಬಳಿ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ತನ್ನಿಷ್ಠ ಸಹಾ ಎಂಬ ಮಹಿಳೆ ಮಮತಾ ಬ್ಯಾನರ್ಜಿ ಅವರ ಬಳಿ ಬಂದು ಅವಾಚ್ಯವಾಗಿ ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾಳೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಈ ಘಟನೆಯನ್ನು ಪಕ್ಷವು ಗಂಭೀರ ಪಿತೂರಿ ಎಂದು ಕರೆದಿದ್ದು, ಈ ಸಂಬಂಧ ದೂರು ದಾಖಲಿಸಲಾಗಿದೆ. Z+ ಭದ್ರತೆ ಹೊಂದಿದ್ದರೂ ಮಮತಾ ಬ್ಯಾನರ್ಜಿ ಅವರ ಭದ್ರತೆಗೆ ಧಕ್ಕೆ ಉಂಟಾಗಿರುವುದು ಆತಂಕಕ್ಕೆ ಕಾರಣವಾಗಿದೆ.




