BHEL ನಲ್ಲಿ 660 ಕುಶಲಕರ್ಮಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) 660 ಕುಶಲಕರ್ಮಿ ಗ್ರೇಡ್-4 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್ ಸೇರಿದಂತೆ ಏಳು ಟ್ರೇಡ್‌ಗಳಲ್ಲಿ ಈ ಹುದ್ದೆಗಳು ಲಭ್ಯ....

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ದೇಶದ ವಿವಿಧ ಘಟಕಗಳಲ್ಲಿ 660 ಕುಶಲಕರ್ಮಿ ಗ್ರೇಡ್-4 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಉತ್ತೀರ್ಣರಾಗಿ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ ಅಥವಾ ಎನ್‌ಎಸಿ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ನವೆಂಬರ್ 18 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಡಿಸೆಂಬರ್ 11, 2026 ರಂದು ನಡೆಯಲಿದ್ದು, ಅರ್ಹರನ್ನು ಕೌಶಲ್ಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಆಸಕ್ತರು ಬಿಹೆಚ್‌ಇಎಲ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ.




