ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ
ಬಿಹಾರದ ವೈಶಾಲಿ ಜಿಲ್ಲೆಯ ರಘೋಪುರ ಸಮೀಪ ನಿನ್ನೆ ಮಂಗಳವಾರ ತಡರಾತ್ರಿ ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿದ ಪರಿಣಾಮ ಮಕ್ಕಳೂ ಸೇರಿದಂತೆ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.ಮೂಲಗಳ...

ಬಿಹಾರದ ವೈಶಾಲಿ ಜಿಲ್ಲೆಯ ರಘೋಪುರ ಸಮೀಪ ಗಂಗಾ ನದಿಯಲ್ಲಿ ಮಂಗಳವಾರ ತಡರಾತ್ರಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ. ರಾಮ್ಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ಔತಣಕೂಟಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಇದ್ದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಹಾಗೂ ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಆರು ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




