ಬಿಜೆಪಿ ಆರೋಪ: ಮಾಜಿ ಸಿಇಸಿಗಳಿಗೆ ಕಾಂಗ್ರೆಸ್ ನೀಡಿದ್ದ ಹುದ್ದೆಗಳ ಪಟ್ಟಿ ಬಹಿರಂಗ!
ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಮತ್ತು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪ...

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ನೇತೃತ್ವದ ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ತೀವ್ರಗೊಂಡಿದೆ. ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ಬಳಸಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಪಿಯೂಷ್ ಗೋಯಲ್, ಹಿಂದಿನ ಕಾಂಗ್ರೆಸ್ ಸರ್ಕಾರಗಳು ತಮಗೆ ನೆರವಾದ ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿ, ರಾಜ್ಯಪಾಲ ಹುದ್ದೆ ಮತ್ತು ಸಚಿವ ಸ್ಥಾನಗಳನ್ನು ನೀಡಿ ಪುರಸ್ಕರಿಸಿದ್ದವು ಎಂದು ದೂರಿದ್ದಾರೆ. ಅಲ್ಲದೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಮೌನ ವಹಿಸಿರುವ ಕಾಂಗ್ರೆಸ್ ನಾಯಕರು, ಈಗ ಕೇವಲ ರಾಜಕೀಯ ಲಾಭಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.




