ದೆಹಲಿ ಕನ್ನಾಟ್ ಪ್ಲೇಸ್ನಲ್ಲಿ ಪ್ರತಿಭಟನೆಗೆ ಸಿದ್ಧತೆ: ಸಿಜೆಪಿ ಮುಖಂಡ ದೀಪ್ಕೆ ಆಕ್ರೋಶ
ಜಂತರ್ ಮಂತರ್ ಪ್ರದೇಶದಲ್ಲಿ ಬಿಗು ಪೊಲೀಸ್ ಬಂದೋಬಸ್ತ್VIDEO | Delhi: Security remains tightened at Jantar Mantar area.(Full video available on PTI Videos - https://t.co/d8jp61yd2p) pic.twi...

ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಈ ತಿಂಗಳ 16ರಂದು ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿ ನಿರ್ಧರಿಸಿದೆ. ಈ ಪ್ರತಿಭಟನೆ ತಡೆಯಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಹಲವೆಡೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ತ್ರಿವರ್ಣ ಧ್ವಜ ಹಾರಿಸುವುದಾಗಿ ಘೋಷಿಸಿದ್ದು, ತಮ್ಮನ್ನು ಬಂಧಿಸಲು ಪೊಲೀಸರು ನಿಗಾ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಜೈಲಿಗೆ ಹೋಗಲು ಸಿದ್ಧವಿರುವುದಾಗಿ ಅವರು ಹೇಳಿದ್ದಾರೆ.




