ಢಾಕಾ: ಮತ್ತೆ ಬಾಂಗ್ಲಾದೇಶಕ್ಕೆ ಮರಳಿದರೆ ಶೇಖ್ ಹಸೀನಾಗೆ ಮರಣದಂಡನೆ ಶಿಕ್ಷೆ ಖಚಿತ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶಕ್ಕೆ ಮರಳಿದರೆ ಮರಣದಂಡನೆ ಜಾರಿಯಾಗುವ ಸಾಧ್ಯತೆ ಇದೆ. ಪ್ರಾಸಿಕ್ಯೂಟರ್ ಪ್ರಕಾರ, ಮೇಲ್ಮನವಿ ಅವಧಿ ಮುಗಿದಿದ್ದು, ಪಾಸ್‌ಪೋರ್ಟ್ ಸಹ ನಿರಾಕರಿಸಲಾಗಿದೆ. ಭಾರತದಿಂದ ಹಸ್ತಾಂತರ...

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ದೇಶಕ್ಕೆ ವಾಪಸಾದಲ್ಲಿ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲಾಗುವುದು ಎಂದು ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ಅಮೀನುಲ್ ಇಸ್ಲಾಂ ಸ್ಪಷ್ಟಪಡಿಸಿದ್ದಾರೆ. ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನೀಡಿದ್ದ 30 ದಿನಗಳ ಅವಧಿಯನ್ನು ಹಸೀನಾ ಬಳಸಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಕಾನೂನು ನಿಯಮಗಳ ಅನ್ವಯ ಶಿಕ್ಷೆಗೆ ಗುರಿಯಾದ ವ್ಯಕ್ತಿಗೆ ಹೊಸ ಪಾಸ್‌ಪೋರ್ಟ್ ನೀಡಲು ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ. ಸದ್ಯ ಭಾರತದಲ್ಲಿರುವ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಬಾಂಗ್ಲಾದೇಶ ಸರ್ಕಾರ ಒತ್ತಾಯಿಸುತ್ತಿದೆ.




