ಎಲ್. ಮುರುಗನ್ ರಾಜೀನಾಮೆ: ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ BJP ನಾಯಕ!
ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿಗೆ ಬರೆದ 5 ಪುಟಗಳ ಪತ್ರದಲ್ಲಿ ಅವರು ತಮ್ಮ ರಾಜ್ಯಸಭಾ ಸದಸ್ಯ...

ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ತಮ್ಮ ಸಚಿವ ಸ್ಥಾನ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಸಮಯ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಪ್ರಧಾನಿ ಮೋದಿಯವರಿಗೆ ಬರೆದ ಪತ್ರದಲ್ಲಿ ಅವರು ತಿಳಿಸಿದ್ದಾರೆ. ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದ ಎಲ್. ಮುರುಗನ್ ಅವರ ರಾಜ್ಯಸಭಾ ಅವಧಿಯು 2030ರ ಏಪ್ರಿಲ್ ವರೆಗೆ ಇತ್ತು. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅವಿನಾಶಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಸೋಲನ್ನಪ್ಪಿದ್ದರು.




