ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಗೋಧ್ರಾದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪೃಥ್ವಿರಾಜ್ ಚವಾಣ್ ಅಸಮಾಧಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಪದೇ ಪದೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕ ಪೃಥ್ವಿರಾಜ್ ಚವಾಣ್ ಆಕ್ರೋಶ ವ್ಯಕ್ತಪಡಿಸ...

ಸ್ವಪಕ್ಷದೊಳಗೆ ಖರ್ಗೆ ವಿರುದ್ಧ ಆಕ್ರೋಶ: ಹಿರಿತನ ಶೋಭೆ, ಆದರೆ ಭಾಷೆ ಸಭ್ಯತೆ ಮೀರಬಾರದು - ಪೃಥ್ವಿರಾಜ್ ಚವಾಣ್
ಹಂಚಿಕೊಳ್ಳಿ:

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಮಲ್ಲಿಕಾರ್ಜುನ ಖರ್ಗೆ ಬಳಸಿದ ಅವಹೇಳನಕಾರಿ ಪದಗಳ ಬಗ್ಗೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗುಜರಾತ್‌ನ ಗೋಧ್ರಾದಲ್ಲಿ ಮಾತನಾಡಿದ ಅವರು, ಹಿರಿಯ ನಾಯಕರು ಸಾರ್ವಜನಿಕವಾಗಿ ಮಾತನಾಡವಾಗ ಭಾಷೆಯ ಮಿತಿ ಮತ್ತು ಸಭ್ಯತೆಯನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದು ಕಿವಿಮಾತು ಹೇಳಿದ್ದಾರೆ. ಪಾಟ್ನಾದ ಕಾರ್ಯಕ್ರಮವೊಂದರಲ್ಲಿ ಖರ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಪ್ರಸ್ತಾಪಿಸಿದ ಚವಾಣ್, ರಾಜಕೀಯದಲ್ಲಿ ವೈಯಕ್ತಿಕ ದ್ವೇಷಕ್ಕಿಂತ ಸೌಹಾರ್ದಯುತ ಸಂಬಂಧ ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ನಾಯಕರು ತಮ್ಮ ಜವಾಬ್ದಾರಿಯನ್ನು ಅರಿತು ಸಂಯಮದಿಂದ ವರ್ತಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹಂಚಿಕೊಳ್ಳಿ: