ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಭಾರತ

ಗ್ರೇಟರ್ ನೋಯ್ಡಾದ ನಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರು ಸಾವು

ಗ್ರೇಟರ್ ನೋಯ್ಡಾ (ಉತ್ತರ ಪ್ರದೇಶ): ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದ ನಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಮೂವರು ಪುಟ್ಟ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ...

ರಾತ್ರಿ ನೂಡಲ್ಸ್ ತಿಂದು ಮಲಗಿದ್ದ ಒಂದೇ ಕುಟುಂಬದ ಐವರು ನಿಗೂಢ ಸಾವು!
ಹಂಚಿಕೊಳ್ಳಿ:

ಗ್ರೇಟರ್ ನೋಯ್ಡಾದ ನಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಮಹೇಶ್, ಲಲಿತಾ ಮತ್ತು ಅವರ ಮಕ್ಕಳಾದ ಲಡ್ಡು, ಮಿಷ್ಟಿ ಹಾಗೂ ಸಾಕ್ಷಾತ್ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ನೂಡಲ್ಸ್ ಮತ್ತು ಟೀ ಸೇವಿಸಿದ ನಂತರ ಇವರು ಮೃತಪಟ್ಟಿದ್ದು, ವಿಷಾಹಾರ ಸೇವನೆಯೇ ಸಾವಿಗೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಕಳುಹಿಸಲಾಗಿದ್ದು, ವಿಧಿವಿಜ್ಞಾನ ತಂಡವು ಮನೆಯಲ್ಲಿದ್ದ ಆಹಾರದ ಮಾದರಿಗಳನ್ನು ಸಂಗ್ರಹಿಸಿದೆ. ಜೇವರ್ ಶಾಸಕ ಧೀರೇಂದ್ರ ಸಿಂಗ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ವೈದ್ಯಕೀಯ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ.

ಹಂಚಿಕೊಳ್ಳಿ: