ಹೈದರಾಬಾದ್: ಅನ್ನಾ ಲೆಜಿನೋವಾ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್
ಹೈದರಾಬಾದ್: ಟಾಲಿವುಡ್ ನ ಖ್ಯಾತ ನಟ ಹಾಗೂ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಮತ್ತು ರಷ್ಯಾ ಮೂಲದ ನಟಿ ಅನ್ನಾ ಲೆಜಿನೋವಾ ವಿಚ್ಛೇದನ ಘೋಷಣೆ ಬೆನ್ನಲ್ಲೇ ಜ್ಯೋತಿಷಿ ವೇಣು ಸ್ವಾಮಿ ಅವರ ಹಳೆಯ ಹೇಳಿಕೆಗಳು ಮತ್ತೆ ವೈರಲ...

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ರಷ್ಯಾದ ನಟಿ ಅನ್ನಾ ಲೆಜಿನೋವಾ ತಾವು ವಿಚ್ಛೇದನ ಪಡೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಪರಸ್ಪರ ಗೌರವದಿಂದ ಈ ನಿರ್ಧಾರ ಕೈಗೊಂಡಿರುವ ಇವರು, ಭವಿಷ್ಯದಲ್ಲಿ ಉತ್ತಮ ಸ್ನೇಹಿತರಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಮಕ್ಕಳ ಪಾಲನೆ ಹಾಗೂ ಅವರ ಸುಸ್ಥಿರ ಭವಿಷ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ದಂಪತಿ ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆಯ ನಡುವೆ, ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದ ಬಗ್ಗೆ ಜ್ಯೋತಿಷಿ ವೇಣು ಸ್ವಾಮಿ ಈ ಹಿಂದೆ ನೀಡಿದ್ದ ಭವಿಷ್ಯವಾಣಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿವೆ.




