ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಹೊರ್ಮುಜ್ ಜಲಸಂಧಿ: 27 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಬಾಂಬ್ ದಾಳಿ

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರಿದ್ದ ತೈಲ ಟ್ಯಾಂಕರ್ ಮೇಲೆ ಲಿಂಪೆಟ್ ಮೈನ್ ಮೂಲಕ ದಾಳಿ ನಡೆಸಲಾಗಿದೆ. ಹಡಗಿನಲ್ಲಿದ್ದ ಎಲ್ಲಾ 27 ಭಾರತೀಯ ಸಿಬ್ಬಂದಿಗಳು ಸಂಪೂರ್ಣ ಸುರಕ್ಷಿತರಾಗಿದ್ದು, ದೊಡ್ಡ ಅನಾಹುತ ತಪ್ಪಿದೆ....

ಹೊರ್ಮುಜ್‌ ಜಲಸಂಧಿಯಲ್ಲಿ 27 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ‘ಮ್ಯಾಗ್ನೆಟಿಕ್ ಬಾಂಬ್’ ದಾಳಿ!
ಹಂಚಿಕೊಳ್ಳಿ:

ಹೊರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಎಂಟಿ ಲೂಯಿಸ್ 1 ತೈಲ ಟ್ಯಾಂಕರ್ ಮೇಲೆ ಲಿಂಪೆಟ್ ಮೈನ್ ಬಳಸಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಚಿಕ್ಕ ದೋಣಿಗಳಲ್ಲಿ ಬಂದವರು ಹಡಗಿನ ಹೊರಮೈಗೆ ಸ್ಫೋಟಕಗಳನ್ನು ಅಂಟಿಸಿದ್ದರಿಂದ ಎಂಜಿನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಕಿ ನಂದಿಸಲು ಸಾಧ್ಯವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಡಗಿನಲ್ಲಿದ್ದ 27 ಭಾರತೀಯ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ. ಅಕ್ಟೋಬರ್ 29 ರಂದು ನಡೆದ ಮತ್ತೊಂದು ದಾಳಿಯ ಸಂತ್ರಸ್ತರನ್ನೂ ಸೇರಿ ಒಟ್ಟು 29 ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಹಂಚಿಕೊಳ್ಳಿ: