'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗಳ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೊಮ್ಮೆ ಹೀನಾಯವಾಗಿ ಸೋಲಲಿದೆ ಎಂದು ಶಾ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ನಾಯಕರು ನಕಾರಾತ್ಮಕ ರಾಜಕೀಯ ಮಾಡುತ್ತಿದ್ದು, ಒಳನುಸುಳುಕೋರರನ್ನು ಮತದಾರರ ಪಟ್ಟಿಗೆ ಸೇರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಸತತವಾಗಿ ಸೋಲುತ್ತಿರುವ ಕಾಂಗ್ರೆಸ್ ಪಕ್ಷವು ಸುಳ್ಳು ಆರೋಪಗಳನ್ನು ಮಾಡುವ ಬದಲು ಆತ್ಮಾವಲೋಕನ ಮಾಡಿಕೊಳ್ಳುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.




