ರಾಹುಲ್ ಗಾಂಧಿ: ಜ್ಞಾನೇಶ್ ಕುಮಾರ್ ಹಾಗೂ ಮೋದಿ ಸರ್ಕಾರ ಹೋಗುವುದು ಖಚಿತ!
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೋಗುತ್ತಾರೆ ಮತ್ತು ಮೋದಿ ಸರ್ಕಾರವೂ ಹೋಗುತ್ತದೆ. ನಂತರ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹ...

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೋಗುತ್ತಾರೆ ಮತ್ತು ಮೋದಿ ಸರ್ಕಾರವೂ ಹೋಗುತ್ತದೆ. ನಂತರ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಯತ್ನಿಸಿದ ಸಿಜೆಪಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, 'ಜ್ಞಾನೇಶ್ ಕುಮಾರ್ ಹೋಗುತ್ತಾರೆ. ಈ ಸರ್ಕಾರ ಹೋಗುತ್ತದೆ. ನಂತರ ಪ್ರಜಾಪ್ರಭುತ್ವದ ದುರಸ್ತಿ ಪ್ರಾರಂಭವಾಗುತ್ತದೆ' ಎಂದು ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಗಿಂತ 'ಹೆಚ್ಚು ಆಳವಾದ ಸಮಸ್ಯೆ' ಇದೆ. ಅದು ಪ್ರಸ್ತುತ ಸರ್ಕಾರವನ್ನು ಮುಕ್ತಾಯಗೊಳಿಸಬೇಕಾಗಿದೆ ಎಂದು ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದರು.
ವಿರೋಧ ಪಕ್ಷಗಳ ಪ್ರತಿಭಟನೆ ಈ ಸರ್ಕಾರದ ಅಡಿಪಾಯವನ್ನು ಅಲುಗಾಡಿಸಿವೆ, ಅದು ಈಗ ಭಯಭೀತವಾಗಿದೆ ಎಂದು ರಾಹುಲ್ ಗಾಂಧಿ ಅವರು ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ನಲ್ಲಿ ಇಂಡಿಯಾ ಬ್ಲಾಕ್ ಸಂಸದರಿಗೆ ಹೇಳಿದ್ದರು.




