ಕರ್ನಾಟಕದಲ್ಲಿ 15,600 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನವೆಂಬರ್ 13 ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ನಗರ ಸಾರಿಗೆ, ವಿದ್ಯುತ್ ಪ್ರಸರಣ, ನವೀಕರಿಸಬಹುದಾದ ಇಂಧನ, ಪೆಟ್ರೋಲಿಯಂ ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆ ಹಾಗೂ ರೈಲ್ವೆ...

ನವೆಂಬರ್ 13ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು 15,600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಮೆಟ್ರೋ ಪಿಂಕ್ ಲೈನ್ ಮಾರ್ಗವನ್ನು ಉದ್ಘಾಟಿಸುವುದರ ಜೊತೆಗೆ ಯಶವಂತಪುರ-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಸೇವೆಗೆ ಹಸಿರು ನಿಶಾನೆ ತೋರಲಿದ್ದಾರೆ. ಇಂಧನ ವಲಯದಲ್ಲಿ ಕೊಪ್ಪಳ, ಗದಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿನ ವಿದ್ಯುತ್ ಪ್ರಸರಣ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದು, ಮಂಗಳೂರಿನಲ್ಲಿ ದೇಶದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಣಾ ಘಟಕವನ್ನು ಉದ್ಘಾಟಿಸಲಿದ್ದಾರೆ. ಇದರೊಂದಿಗೆ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಪಡಿಸಿದ ರೈಲು ನಿಲ್ದಾಣಗಳು ಹಾಗೂ ಮೈಸೂರಿನ ತಾರಾಲಯವನ್ನು ಪ್ರಧಾನಿಯವರು ಉದ್ಘಾಟಿಸಲಿದ್ದಾರೆ.




