ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಕೇರಳದಲ್ಲಿ ಪೆಟ್ರೋಲ್ ಬಂಕ್‌ಗಳ ಮೇಲೆ ದಾಳಿ: ಎಥೆನಾಲ್ ಪ್ರಮಾಣದ ತಪಾಸಣೆ ಆರಂಭ

ತಿರುವನಂತಪುರಂ: ಪೆಟ್ರೋಲ್‌ನಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆಯೇ ಎಂಬ ಅನುಮಾನ ಹಿನ್ನೆಲೆಯಲ್ಲಿ ಕರ್ನಾಟಕದ ಬೆನ್ನಲ್ಲೇ ಇದೀಗ ಕೇರಳ ಸರ್ಕಾರವೂ ಇಂಧನ ಗುಣಮಟ್ಟ ಪರೀಕ್ಷೆಗೆ ಮುಂದಾಗಿದೆ....

ಕರ್ನಾಟಕದ ಬೆನ್ನಲ್ಲೇ ಕೇರಳದಲ್ಲೂ ಪೆಟ್ರೋಲ್ ಪರೀಕ್ಷೆ; ಎಥೆನಾಲ್ ಪ್ರಮಾಣ ಪತ್ತೆಗೆ ದಿಢೀರ್ ದಾಳಿ! ತನಿಖೆ ಆರಂಭ
ಹಂಚಿಕೊಳ್ಳಿ:

ಪೆಟ್ರೋಲ್‌ನಲ್ಲಿ ನಿಗದಿತ ಶೇ.20ರ ಮಿತಿಗಿಂತ ಹೆಚ್ಚು ಎಥೆನಾಲ್ ಬೆರೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ತನಿಖೆ ಆರಂಭಿಸಿದೆ. ಎರ್ನಾಕುಲಂನ ಚೆಂಬುಮುಕ್ಕು ಸೇರಿದಂತೆ ರಾಜ್ಯದ ವಿವಿಧೆಡೆ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಈ ಮಾದರಿಗಳನ್ನು ಸರ್ಕಾರಿ ರಾಸಾಯನಿಕ ಪ್ರಯೋಗಾಲಯಗಳಿಗೆ ಕಳುಹಿಸಿ ಪರೀಕ್ಷಿಸಲಾಗುತ್ತಿದೆ ಎಂದು ಸಚಿವ ಅನೂಪ್ ಜೇಕಬ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಈ ಹಿಂದೆ 63 ಮಾದರಿಗಳನ್ನು ಪರೀಕ್ಷಿಸಿದಾಗ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಎಥೆನಾಲ್ ಪತ್ತೆಯಾಗಿತ್ತು ಎಂದು ವರದಿಯಾಗಿತ್ತು.

ಹಂಚಿಕೊಳ್ಳಿ: