ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಖರಗೋನ್: ನರ್ಮದಾ ನದಿ ತೀರದಲ್ಲಿ ಪತ್ತೆಯಾದ 343 ಮತದಾರರ ಗುರುತಿನ ಚೀಟಿಗಳು

ಖರಗೋನ್: ಮಧ್ಯಪ್ರದೇಶದ ಖರಗೋನ್ ಜಿಲ್ಲೆಯ ಮಂಡಲೇಶ್ವರ ಪಟ್ಟಣದ ನರ್ಮದಾ ನದಿ ತೀರದಲ್ಲಿ ಭಾನುವಾರ ನೂರಾರು ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿವೆ. ಈ ಘಟನೆಯ ಬೆನ್ನಲ್ಲೇ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿ, ನಿಷ್ಪಕ್ಷ...

ನರ್ಮದಾ ನದಿ ತೀರದಲ್ಲಿ ನೂರಾರು ಮತದಾರರ ಗುರುತಿನ ಚೀಟಿ ಪತ್ತೆ
ಹಂಚಿಕೊಳ್ಳಿ:

ಮಧ್ಯಪ್ರದೇಶದ ಖರಗೋನ್ ಜಿಲ್ಲೆಯ ಮಂಡಲೇಶ್ವರದಲ್ಲಿ ನರ್ಮದಾ ನದಿಯ ದಡದಲ್ಲಿ ನೂರಾರು ಮತದಾರರ ಗುರುತಿನ ಚೀಟಿಗಳು ಬಿದ್ದಿರುವುದು ಕಂಡುಬಂದಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಸ್ಥಳೀಯರು ಒಟ್ಟು 343 ಕಾರ್ಡ್‌ಗಳನ್ನು ಪತ್ತೆ ಹಚ್ಚಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇವು ಇಂದೋರ್ ಜಿಲ್ಲೆಯ ರಾವೂ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ದಾಖಲೆಗಳಾಗಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ನಾಯಕ ರವಿ ನಾಯ್ಕ್, ಕೂಡಲೇ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಹಂಚಿಕೊಳ್ಳಿ: