ಕೋಲ್ಕತ್ತಾ ವಿಮಾನ ನಿಲ್ದಾಣ: ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ ಪತ್ರ ಪತ್ತೆ
ಕೋಲ್ಕತಾ: ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ಮುಂಬೈಗೆ ಹೊರಡಲಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ (ಅಪಹರಣ) ಬೆದರಿಕೆ ಸಂದೇಶ ಪತ್ತೆಯಾಗಿದ್ದು, ಕೆಲ...

ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಅಪಹರಣದ ಬೆದರಿಕೆ ಪತ್ರ ಕಂಡುಬಂದಿದೆ. ಈ ಪತ್ರದಲ್ಲಿ ಬೆಳಗ್ಗೆ 11.10ಕ್ಕೆ ವಿಮಾನವನ್ನು ಅಪಹರಿಸಲಾಗುವುದು ಎಂದು ಬರೆಯಲಾಗಿತ್ತು. ತಕ್ಷಣ ಎಚ್ಚೆತ್ತ ವಿಮಾನ ನಿಲ್ದಾಣದ ಅಧಿಕಾರಿಗಳು ಎಲ್ಲಾ ಪ್ರಯಾಣಿಕರನ್ನು ಹೊರಗೆ ಕಳುಹಿಸಿ, ವಿಮಾನವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ವಿಮಾನ ನಿಲ್ದಾಣದ ನಿರ್ದೇಶಕ ವಿಕ್ರಮ್ ಸಿಂಗ್ ಅವರ ನೇತೃತ್ವದಲ್ಲಿ ಭದ್ರತಾ ಸಿಬ್ಬಂದಿ ವಿಮಾನದ ಸಂಪೂರ್ಣ ತಪಾಸಣೆ ನಡೆಸುತ್ತಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.




