ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಟಿಎಂಸಿ ಶಾಸಕ ಪರೇಶ್ ರಾಮ್ ದಾಸ್ ಬಂಧನ
ಕೋಲ್ಕತ್ತ: ಅತ್ಯಾಚಾರ, ಸುಲಿಗೆ ಮತ್ತು ಚುನಾವಣೆ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ, ತೃಣಮೂಲ ಕಾಂಗ್ರೆಸ್ ಶಾಸಕ ಪರೇಶ್ ರಾಮ್ ದಾಸ್ ಅವರನ್ನು ಸೋಮವಾರ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿ...

ಅತ್ಯಾಚಾರ ಮತ್ತು ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿದ್ದ ಕ್ಯಾನಿಂಗ್ ಪಶ್ಚಿಮ್ ಕ್ಷೇತ್ರದ ಶಾಸಕ ಪರೇಶ್ ರಾಮ್ ದಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಮಧ್ಯಾಹ್ನ ಮುಂಬೈಗೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಟಿಎಂಸಿ ನಾಯಕನನ್ನು ಬರುಯಿಪುರ ಪೊಲೀಸ್ ತಂಡ ಬಂಧಿಸಿದೆ. ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಶಾಸಕರನ್ನು ಹೆಚ್ಚಿನ ವಿಚಾರಣೆಗಾಗಿ ಬರುಯಿಪುರಕ್ಕೆ ಕರೆದೊಯ್ಯಲಾಗಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.




