ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಕುಲ್ಗಾಮ್‌ನಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ: ಹೊಸ ಉಗ್ರ ಸಂಘಟನೆಯಿಂದ ಹೊಣೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ(CRPF) ಸಿಬ್ಬಂದಿ ಮೇಲೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಪಸ್ದಾರನ್-ಎ-ಹುರಿಯತ್ ಕಾಶ್ಮೀರ್ ಎಂಬ ಹೊಸ ಉಗ್ರ ಸಂಘಟನೆ ಹೊತ್ತುಕೊಂಡಿ...

CRPF ಯೋಧರ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಹೊಸ ಉಗ್ರ ಸಂಘಟನೆ; RSS, 'ಹಿಂದುತ್ವ ಆಡಳಿತ'ಕ್ಕೆ 'ವಿನಾಶಕಾರಿ' ಬೆದರಿಕೆ!
ಹಂಚಿಕೊಳ್ಳಿ:

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮಿರ್ ಬಜಾರ್ ಬಳಿ ಇರುವ ಸಿಆರ್‌ಪಿಎಫ್ ಚೆಕ್‌ಪಾಯಿಂಟ್ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಓರ್ವನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಕೃತ್ಯದ ಹೊಣೆಯನ್ನು ಪಸ್ದಾರನ್-ಎ-ಹುರಿಯತ್ ಕಾಶ್ಮೀರ್ ಎಂಬ ಹೊಸ ಸಂಘಟನೆ ಹೊತ್ತುಕೊಂಡಿದೆ. ಇದರ ವಕ್ತಾರ ಮೊಹಮ್ಮದ್ ಒಮರ್ ಅಜ್ಜಮ್, ಆರ್‌ಎಸ್‌ಎಸ್ ಮತ್ತು ಹಿಂದುತ್ವ ಆಡಳಿತದ ವಿರುದ್ಧ ಮುಂದಿನ ದಿನಗಳಲ್ಲಿ ಹೆಚ್ಚಿನ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಹೊಸ ಸಂಘಟನೆಯ ಜಾಲದ ಬಗ್ಗೆ ಭದ್ರತಾ ಸಂಸ್ಥೆಗಳು ತನಿಖೆಯನ್ನು ಆರಂಭಿಸಿವೆ.

ಹಂಚಿಕೊಳ್ಳಿ: