ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಕುಲ್ಗಾಂನಲ್ಲಿ ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ

ಜಮ್ಮು-ಕಾಶ್ಮೀರದ ಕುಲ್ಗಾಂನ ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲೆ ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಉಗ್ರರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ....

CRPF ಚೆಕ್‌ಪೋಸ್ಟ್ ಮೇಲೆ ಉಗ್ರರ ಅಟ್ಯಾಕ್​​: ಕೇವಲ 15 ಸೆಕೆಂಡ್‌ಗಳಲ್ಲಿ ಸುಮಾರು 30 ಸುತ್ತು ಗುಂಡಿನ ದಾಳಿ
ಹಂಚಿಕೊಳ್ಳಿ:

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ಮಿರ್ ಬಜಾರ್ ಬಳಿಯ ಅಖ್ರಾನ್‌ನಲ್ಲಿರುವ ಸಿಆರ್‌ಪಿಎಫ್ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್‌ನಲ್ಲಿ ಬಂದ ದಾಳಿಕೋರರು ಕೇವಲ 15 ಸೆಕೆಂಡ್‌ಗಳಲ್ಲಿ 30 ಸುತ್ತು ಗುಂಡುಗಳನ್ನು ಹಾರಿಸಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಘಟನೆಯಲ್ಲಿ ರಾಕೇಶ್ ದಾಸ್, ಸಂತೋಷ್ ಚಂದ್ರು ಮತ್ತು ಸೋಮವೀರ್ ಸಿಂಗ್ ಎಂಬ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ಅನಂತ್‌ನಾಗ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಿಆರ್‌ಪಿಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಂಚಿಕೊಳ್ಳಿ: