ಲೇಹ್: ಅನುಮತಿ ಇಲ್ಲದೆ ಶಾಲೆ ನಡೆಸುತ್ತಿರುವ ಆರೋಪ, ಸೋನಮ್ ವಾಂಗ್‌ಚುಕ್ ಸಂಸ್ಥೆಗೆ ನೋಟಿಸ್
ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ 'ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್, ಲಡಾಖ್' (HIAL), ತನಗೆ ನೀಡಲಾಗಿದ್ದ ಭೂಮಿಯ ಹಂಚಿಕೆಯನ್ನು ರದ್ದುಗೊಳಿಸಿರುವುದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುತ್...

ಲಡಾಖ್ ಆಡಳಿತವು ಲೇಹ್‌ನಲ್ಲಿರುವ ಸೋನಮ್ ವಾಂಗ್‌ಚುಕ್ ಅವರ ಒಡೆತನದ ಡೆಸರ್ಟ್ ಫ್ಲವರ್ ಸ್ಕೂಲ್‌ಗೆ ನೋಟಿಸ್ ಜಾರಿ ಮಾಡಿದೆ. ಅಗತ್ಯ ಅನುಮತಿಗಳನ್ನು ಪಡೆಯದೆಯೇ ಶಾಲೆಯ ಚಟುವಟಿಕೆಗಳನ್ನು ಆರಂಭಿಸಲಾಗಿದೆ ಎಂದು ಆರೋಪಿಸಿ, ತರಗತಿಗಳನ್ನು ತಕ್ಷಣವೇ ನಿಲ್ಲಿಸುವಂತೆ ತಹಸೀಲ್ದಾರ್ ಸೂಚಿಸಿದ್ದಾರೆ. ಈ ನೋಟಿಸ್ ಅನ್ನು ಎಚ್‌ಐಎಎಲ್ ಸಂಸ್ಥೆಯ ಸಿಇಒ ಡಾ. ಗೀತಾಂಜಲಿ ಜೆ. ಆಂಗ್ಮೋ ಅವರಿಗೆ ನೀಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವ ಹಿನ್ನೆಲೆಯಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಮತ್ತು ಯಾವುದೇ ಹೊಸ ಚಟುವಟಿಕೆಗಳನ್ನು ಕೈಗೊಳ್ಳದಂತೆ ಆಡಳಿತವು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.




