ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಹಿಂದೆ ಕಾಂಗ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಸಚಿವ ಪಿಯೂಷ್ ಗೋಯಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳು ಮತ್ತು ರಾಜಕೀಯ ಹುದ್ದೆಗಳನ್ನು ಆಮಿಷವಾಗಿ ನೀಡಿ ಆಯೋಗದ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ಟಿ.ಎನ್. ಸೆಶನ್, ಎಂ.ಎಸ್. ಗಿಲ್ ಮತ್ತು ನವೀನ್ ಚಾವ್ಲಾ ಅವರ ಉದಾಹರಣೆಗಳನ್ನು ನೀಡಿದ ಸಚಿವರು, ರಾಹುಲ್ ಗಾಂಧಿ ಅವರು ಈ ಹಿಂದಿನ ಅವ್ಯವಹಾರಗಳಿಗೆ ಉತ್ತರಿಸಬೇಕೆಂದು ಸವಾಲು ಹಾಕಿದ್ದಾರೆ.




