ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಮುಂಬೈ: ಅಮಿತಾಬ್ ಬಚ್ಚನ್ ಮನೆ ಹಾಗೂ ದಿಲ್ಜಿತ್ ದೋಸಾಂಜ್ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ

ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆ ಮೇಯರ್ ರಿತು ತಾವ್ಡೆ ಅವರಿಗೆ ಶುಕ್ರವಾರ ಬಂದ ಇಮೇಲ್ ಸಂದೇಶವೊಂದರಲ್ಲಿ ಅವರ ಕಚೇರಿ, ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ನಿವಾಸ ಮತ್ತು ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯ...

ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ನಿವಾಸ, ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಸ್ಫೋಟದ ಬೆದರಿಕೆ! ಇಮೇಲ್ ಸಂದೇಶ
ಹಂಚಿಕೊಳ್ಳಿ:

ಮುಂಬೈನ ಮೇಯರ್ ರಿತು ತಾವ್ಡೆ ಅವರ ಕಚೇರಿಗೆ ಬಂದ ಇಮೇಲ್ ಸಂದೇಶವೊಂದು ನಗರದಲ್ಲಿ ಭೀತಿ ಹುಟ್ಟಿಸಿದೆ. ಈ ಸಂದೇಶದಲ್ಲಿ ನಟ ಅಮಿತಾಬ್ ಬಚ್ಚನ್ ಅವರ ಜಲ್ಸಾ ನಿವಾಸ, ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಬಿಎಂಸಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಎಚ್ಚರಿಸಲಾಗಿದೆ. ಉಪ ಮೇಯರ್ ಸಂಜಯ್ ಘಾಡಿ ಅವರಿಗೆ ಬಂದ ಸಂದೇಶದಲ್ಲಿ ಶಾಲೆಯೊಂದರ ಮೇಲೆ ದಾಳಿ ನಡೆಸುವ ಬೆದರಿಕೆಯೂ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಬೆದರಿಕೆ ಬಂದಿರುವ ಎಲ್ಲಾ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಹಂಚಿಕೊಳ್ಳಿ: