ಮುಂಬೈ: ಭಾರತ ತೊರೆಯುವಂತೆ ನೀಡಿದ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಮ್ರಾನ್ ಖಾನ್
ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಮುಂಬೈನಲ್ಲಿ ಕಳೆದ ಶನಿವಾರ ನಡೆದ 'ಕಾಕ್ರೋಚ್ ಜನತಾ ಪಾರ್ಟಿ'(CJP) ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ...

ಮುಂಬೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ದೇಶ ತೊರೆಯುವಂತೆ ಮುಂಬೈ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಅಮೆರಿಕದ ಪ್ರಜೆಯಾಗಿರುವ ಮತ್ತು ಒಸಿಐ ಕಾರ್ಡ್ ಹೊಂದಿರುವ ಇಮ್ರಾನ್ ಖಾನ್ ಈ ನೋಟಿಸ್ ಅನ್ನು ಕಾನೂನುಬಾಹಿರ ಎಂದು ಕರೆದಿದ್ದು, ಇದನ್ನು ರದ್ದುಗೊಳಿಸುವಂತೆ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಮುನ್ಸೂಚನೆ ಅಥವಾ ವಿಚಾರಣೆ ನಡೆಸದೆ ಪೊಲೀಸರು ಏಕಪಕ್ಷೀಯವಾಗಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಅರ್ಜಿಯಲ್ಲಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ತುರ್ತು ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಚಂದ್ರ ತ್ರಿಪಾಠಿ ಅವರ ಪೀಠದ ಮುಂದೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.




