ಮುಂಬೈ ಲೋಕಲ್ ರೈಲಿನಲ್ಲಿ ಪ್ರಯಾಣಿಕರ ನಡುವೆ ಜಗಳ, ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ
ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನ ಲೋಕಲ್ ರೈಲಿನಲ್ಲಿ ಶುಕ್ರವಾರ ರಾತ್ರಿ ಇಬ್ಬರು ಪ್ರಯಾಣಿಕರ ನಡುವೆ ಮಾರಾಮಾರಿ ನಡೆದಿದೆ. ಈ ಘರ್ಷಣೆಯ ವೇಳೆ, ಒಬ್ಬ ಪ್ರಯಾಣಿಕ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದಿದ್ದಾರೆ. ಆದರ...

ಮುಂಬೈನ ಚರ್ಚ್‌ಗೇಟ್-ವಿರಾರ್ ಫಾಸ್ಟ್ ಲೋಕಲ್ ರೈಲಿನಲ್ಲಿ ಶುಕ್ರವಾರ ರಾತ್ರಿ 10:30ರ ಸುಮಾರಿಗೆ ಇಬ್ಬರು ಪ್ರಯಾಣಿಕರ ನಡುವೆ ಗಲಾಟೆ ನಡೆದಿದೆ. ರೈಲಿನ ಬಾಗಿಲ ಬಳಿ ನಿಲ್ಲುವ ವಿಚಾರಕ್ಕೆ ಉಂಟಾದ ವಾಗ್ವಾದವು ತೀವ್ರಗೊಂಡು ಇಬ್ಬರೂ ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ವೇಳೆ ಒಬ್ಬ ವ್ಯಕ್ತಿ ರೈಲಿನಿಂದ ಮುಂಬೈ ಸೆಂಟ್ರಲ್ ನಿಲ್ದಾಣದ ಹಳಿಗಳ ಮೇಲೆ ಬಿದ್ದಿದ್ದಾರೆ. ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣದಿಂದಾಗಿ ಆ ಪ್ರಯಾಣಿಕ ಯಾವುದೇ ಗಂಭೀರ ಅಪಾಯವಿಲ್ಲದೆ ಪಾರಾಗಿದ್ದಾರೆ.




