ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ನಾಗ್ಪುರದಲ್ಲಿ ಮೋಹನ್ ಭಾಗವತ್ ಹೇಳಿಕೆ: ಭಾರತವನ್ನು ಗುರಿಯಾಗಿಸಿವೆ ಪಾಶ್ಚಾತ್ಯ ಶಕ್ತಿಗಳು

ನಾಗ್ಪುರ: ಆಡಳಿತ ಬದಲಾವಣೆಗೆ ಯತ್ನಿಸುತ್ತಿರುವ ಪಾಶ್ಚಿಮಾತ್ಯ ಶಕ್ತಿಗಳ ಅಂತಿಮ ಗುರಿ ಭಾರತವೇ ಆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಗಳು ರಾಜಕ...

ಪಾಶ್ಚಾತ್ಯ ಶಕ್ತಿಗಳ ಟಾರ್ಗೆಟ್ ಭಾರತ ಆಗಿದೆ: RSS ಮುಖ್ಯಸ್ಥ ಮೋಹನ್ ಭಾಗವತ್; Video
ಹಂಚಿಕೊಳ್ಳಿ:

ನಾಗ್ಪುರದ ವಿಜಯದಶಮಿ ಸಮಾವೇಶದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ವಿದೇಶಿ ಶಕ್ತಿಗಳು ಭಾರತದಲ್ಲಿ ಆಡಳಿತ ಬದಲಾವಣೆಗೆ ಸಂಚು ರೂಪಿಸುತ್ತಿವೆ ಎಂದು ಎಚ್ಚರಿಸಿದ್ದಾರೆ. ಬಾಂಗ್ಲಾದೇಶ ಮತ್ತು ಫ್ರಾನ್ಸ್‌ನಂತಹ ದೇಶಗಳಲ್ಲಿ ನಡೆದ ಹಿಂಸಾಚಾರದ ಮಾದರಿಯಲ್ಲಿಯೇ ಇಲ್ಲಿಯೂ ಅಶಾಂತಿ ಸೃಷ್ಟಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗಳು ಸಮಸ್ಯೆ ಪರಿಹರಿಸುವ ಸಾಧನವಾಗಬೇಕೇ ಹೊರತು ಸಮಾಜದಲ್ಲಿ ದ್ವೇಷ ಮತ್ತು ವಿಭಜನೆಯನ್ನು ಬಿತ್ತುವ ರಾಜಕೀಯ ಅಸ್ತ್ರಗಳಾಗಬಾರದು ಎಂದು ಅವರು ಕಿವಿಮಾತು ಹೇಳಿದರು. ಭಾರತವು ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುವುದನ್ನು ತಡೆಯಲು ಇಂತಹ ಶಕ್ತಿಗಳು ಸಕ್ರಿಯವಾಗಿವೆ ಎಂದು ಅವರು ಪ್ರತಿಪಾದಿಸಿದರು.

ಹಂಚಿಕೊಳ್ಳಿ: