ನಾಲ್ಕು ರಾಜ್ಯಗಳ ಎಂಎಲ್ ಸಿ ಚುನಾವಣೆ: ಕಾಂಗ್ರೆಸ್ ಶೂನ್ಯ ಸಾಧನೆಗೆ ಪ್ರಧಾನಿ ಮೋದಿ ವ್ಯಂಗ್ಯ
ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ನಡೆದ ವಿಧಾನ ಪರಿಷತ್ (MLC) ಚುನಾವಣೆಯ ಫಲಿತಾಂಶಗಳ ಪ್ರಕಟವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್...

ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಹಾಗೂ ಕರ್ನಾಟಕದ ಒಟ್ಟು 28 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. ಬ್ಯಾಲೆಟ್ ಪೇಪರ್ ಬಳಸಿ ನಡೆದ ಈ ಚುನಾವಣೆಯಲ್ಲಿನ ಸೋಲನ್ನು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವು ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಗೆದ್ದು ಪ್ರಾಬಲ್ಯ ಮೆರೆದಿದೆ. ಇವಿಎಂ ಬಗ್ಗೆ ವಿಪಕ್ಷಗಳು ಟೀಕೆ ಮಾಡುತ್ತಿರುವ ನಡುವೆಯೇ, ಮತಪತ್ರದ ಮೂಲಕ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಭಂಗ ಅನುಭವಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.




