ನವದೆಹಲಿ: 48 ಗಂಟೆ ಬಂಧನದಲ್ಲಿದ್ದ ಸರ್ಕಾರಿ ನೌಕರ ಸ್ವಯಂ ಅಮಾನತು ಎಂದು ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ: ಸರ್ಕಾರಿ ನೌಕರನೊಬ್ಬ 48 ಗಂಟೆಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ ನಿಯಮಗಳ ಪ್ರಕಾರ ಆತ ಸ್ವಯಂಚಾಲಿತವಾಗಿ ಅಮಾನತುಗೊಂಡಂತೆ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸರ್ಕಾರಿ ನೌಕರನೊಬ್ಬ 48 ಗಂಟೆಗಳಿಗಿಂತ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿ ಇದ್ದರೆ ಆತ ತಾನಾಗಿಯೇ ಅಮಾನತುಗೊಂಡಂತೆ ಪರಿಗಣಿಸಲ್ಪಡುತ್ತಾನೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಬಿಹಾರದ ವಿಶ್ವಜೀತ್ ಸಿಂಗ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ಮನಮೋಹನ್ ಅವರ ಪೀಠ ಈ ಅಭಿಪ್ರಾಯ ನೀಡಿದೆ. ಲಂಚ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಶ್ವಜೀತ್ ಸಿಂಗ್ ಅವರನ್ನು ಮರುನೇಮಕ ಮಾಡಿರುವ ಕ್ರಮವನ್ನು ಮರುಪರಿಶೀಲಿಸುವಂತೆ ಬಿಹಾರ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಲಂಚದ ಮೊತ್ತವನ್ನು ಮಾತ್ರ ಪರಿಗಣಿಸದೆ ಪ್ರಕರಣದ ಗಂಭೀರತೆಯನ್ನು ಆಧರಿಸಿ ಜಾಮೀನು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ನ್ಯಾಯಪೀಠ ತಿಳಿಸಿದೆ.




