ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ನವದೆಹಲಿ: ಅಜ್ಜನ ಆಸ್ತಿಯಲ್ಲಿ ಮೊಮ್ಮಗನಿಗೆ ಜನ್ಮಸಿದ್ಧ ಹಕ್ಕಿಲ್ಲವೆಂದು ಸುಪ್ರೀಂ ತೀರ್ಪು

ನವದೆಹಲಿ: ಅಜ್ಜನ ಆಸ್ತಿಯಲ್ಲಿ ಮೊಮ್ಮಕ್ಕಳ ಹಕ್ಕುಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ, ಲ್ಯಾಂಡ್ ಮಾರ್ಕ್ ತೀರ್ಪು ಪ್ರಕಟಿಸಿದೆ.1956ರ ಹಿಂದೂ ಉತ್ತರಾಧಿಕಾರ ಕಾಯ್ದೆಯ ಸೆಕ್ಷನ್ 8ರ ಅಡಿಯಲ್ಲಿ ಅಜ್ಜನ ಆಸ್ತಿ ಅವರ ಮಕ್ಕಳಿ...

ಅಜ್ಜನ ಆಸ್ತಿಯಲ್ಲಿ ಮೊಮ್ಮಗನಿಗೆ ಜನ್ಮಸಿದ್ಧ ಹಕ್ಕು ಇದೆಯೇ?: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಹಂಚಿಕೊಳ್ಳಿ:

ಅಜ್ಜನ ಆಸ್ತಿ ಹಿಂದೂ ಉತ್ತರಾಧಿಕಾರ ಕಾಯ್ದೆಯ ಸೆಕ್ಷನ್ 8ರ ಅಡಿಯಲ್ಲಿ ತಂದೆಗೆ ವರ್ಗಾವಣೆಯಾದಾಗ, ಅದು ಅವರ ಸ್ವಂತ ಆಸ್ತಿಯಾಗಿ ಪರಿವರ್ತನೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಆಗಸ್ಟೀನ್ ಜಾರ್ಜ್ ಮಸಿಹ್ ಮತ್ತು ಸುನೀತಾ ಅಗರ್ವಾಲ್ ಅವರ ಪೀಠವು, ಅಂತಹ ಆಸ್ತಿಯ ಮೇಲೆ ಮೊಮ್ಮಕ್ಕಳು ಜನ್ಮಸಿದ್ಧ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ತಮಿಳುನಾಡಿನ ಪ್ರಕರಣವೊಂದರಲ್ಲಿ ಮಗ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸುವ ಮೂಲಕ ನ್ಯಾಯಾಲಯವು ಈ ಮಹತ್ವದ ತೀರ್ಪು ನೀಡಿದೆ. ಅಜ್ಜನ ಆಸ್ತಿ ಹಂಚಿಕೆಯಾದ ನಂತರ ಅದು ತಂದೆ ಮತ್ತು ಮಕ್ಕಳ ಜಂಟಿ ಕುಟುಂಬದ ಆಸ್ತಿಯಾಗಿ ಉಳಿಯುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಹಂಚಿಕೊಳ್ಳಿ: