ನವದೆಹಲಿ: ಎಕ್ಸ್‌ಪ್ರೆಸ್‌ವೇಗಳಲ್ಲಿ 120 ಕಿ.ಮೀ ವೇಗ ಮೀರಿದರೂ ದಂಡವಿಲ್ಲ ಎಂದು ಗಡ್ಕರಿ ಸ್ಪಷ್ಟನೆ
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವಾಹನ ಸವಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಎಕ್ಸ್‌ಪ್ರೆಸ್‌ವೇಗಳಲ್ಲಿ ಇನ್ಮುಂದೆ 120 ಕಿ.ಮೀ ವೇಗದಲ್ಲಿ ಸಂಚರಿಸುವ ವಾಹನ ಸವಾ...

ದೇಶದ ಎಕ್ಸ್‌ಪ್ರೆಸ್‌ವೇಗಳಲ್ಲಿ ವಾಹನ ಚಲಾಯಿಸುವವರಿಗೆ ಸಚಿವ ನಿತಿನ್ ಗಡ್ಕರಿ ಅವರು ವಿನಾಯಿತಿ ಘೋಷಿಸಿದ್ದಾರೆ. ನಿಗದಿತ ವೇಗಕ್ಕಿಂತ ಶೇ. 20ರಷ್ಟು ಹೆಚ್ಚಿನ ವೇಗದಲ್ಲಿ ಸಂಚರಿಸಿದರೂ ಅಂತಹ ವಾಹನ ಸವಾರರಿಗೆ ದಂಡದ ಚಲನ್ ವಿಧಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 120 ಕಿ.ಮೀ ವೇಗದಲ್ಲಿ ಚಲಿಸುವಾಗ ದಂಡದ ನೋಟಿಸ್ ಬರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇನ್ನು ಮುಂದೆ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಪಾಲನೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಲು ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಲೇನ್ ಶಿಸ್ತು ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ಹೆದ್ದಾರಿ ಸುರಕ್ಷತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.




