ನವದೆಹಲಿ: ರಾಹುಲ್ ಗಾಂಧಿ ವಿರುದ್ಧದ ಅರ್ಜಿದಾರ ವಕೀಲರಿಗೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ: ಯಾವುದೇ ಆಧಾರವಿಲ್ಲದೆ ರಾಹುಲ್ ಗಾಂಧಿ ವಿರುದ್ಧ 'ಅಕ್ರಮ ಆಸ್ತಿ' ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಪ್ರಸ್ತಾಪಿಸಿದ್ದಕ್ಕಾಗಿ, ವಕೀಲರೊಬ್ಬರನ್ನು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಸೂರ್ಯಕಾಂ...

ರಾಹುಲ್ ಗಾಂಧಿ ಅವರ ವಿರುದ್ಧ ಅಕ್ರಮ ಆಸ್ತಿ ಆರೋಪ ಹೊರಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಯಾವುದೇ ಗಂಭೀರ ಆಧಾರಗಳಿಲ್ಲದೆ ಪ್ರಚಾರಕ್ಕಾಗಿ ಇಂತಹ ವಿಷಯ ಪ್ರಸ್ತಾಪಿಸುತ್ತಿದ್ದೀರಾ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಶ್ನಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಈಗಾಗಲೇ ತಡೆಯಾಜ್ಞೆ ನೀಡಿದೆ. ಅಲ್ಲದೆ, ಸಿಬಿಐ ಮತ್ತು ಇಡಿ ಸಂಸ್ಥೆಗಳು ಹೈಕೋರ್ಟ್ ಮುಂದೆ ವರದಿ ಸಲ್ಲಿಸದಂತೆ ನಿರ್ಬಂಧ ವಿಧಿಸಲಾಗಿದೆ. ನ್ಯಾಯಾಲಯದ ಕಲಾಪದ ಲೈವ್ ಸ್ಟ್ರೀಮಿಂಗ್ ನಿಲ್ಲಿಸುವಂತೆಯೂ ನ್ಯಾಯಮೂರ್ತಿಗಳು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.




