ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ 130 ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ನೇಮಕ
ಭಾರತದ ಸುಪ್ರೀಂ ಕೋರ್ಟ್ 130 ಜೂನಿಯರ್ ಕೋರ್ಟ್ ಅಟೆಂಡೆಂಟ್ ಗ್ರೂಪ್-ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಪಾಸಾದವರು ಈ ಸರ್ಕಾರಿ ಉದ್ಯೋಗಕ್ಕೆ ಅರ್ಹರು. ನವೆಂಬರ್ 4 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿ...

ಭಾರತದ ಸುಪ್ರೀಂ ಕೋರ್ಟ್ ಸಚಿವಾಲಯವು 130 ಗ್ರೂಪ್-ಸಿ ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ಅಥವಾ 12ನೇ ತರಗತಿ ಪೂರ್ಣಗೊಳಿಸಿದ 18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ನವೆಂಬರ್ 4 ರಿಂದ 25ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದ್ದು, ಪೇ-ಲೆವೆಲ್ 3 ಅಡಿಯಲ್ಲಿ 21,700 ರಿಂದ 69,100 ರೂ. ವರೆಗೆ ಮಾಸಿಕ ವೇತನ ಸಿಗಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 1,500 ರೂ. ಹಾಗೂ ಮೀಸಲಾತಿ ವರ್ಗದವರು 750 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.




