ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ನವದೆಹಲಿ: ತಿಹಾರ್ ಜೈಲಿನಿಂದ ಬಿಡುಗಡೆಯಾದ ಸಿಜೆಪಿ ನಾಯಕರು ಸೌರವ್ ದಾಸ್ ಮತ್ತು ಅಶುತೋಷ್ ರಂಕಾ

ನವದೆಹಲಿ: ತಿಹಾರ್ ಜೈಲಿನಿಂದ ಬಿಡುಗಡೆಯಾದ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.ಜಂತರ್ ಮಂತರ್...

ನನಗಿಂತಲೂ ದೊಡ್ಡ ನಾಯಕರು, ನನ್ನ ಜೀವವೇ ನಿಮಗಾಗಿ ಮೀಸಲು: ಜೈಲಿನಿಂದ ಹೊರಬಂದ ಸೌರವ್ ದಾಸ್, ಅಶುತೋಷ್ ರಂಕಾ ಕೊಂಡಾಡಿದ ಅಭಿಜೀತ್ ದೀಪ್ಕೆ
ಹಂಚಿಕೊಳ್ಳಿ:

ಅಕ್ಟೋಬರ್ 14ರಂದು ಜಂತರ್ ಮಂತರ್ ಪ್ರತಿಭಟನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಕಾಕ್ರೋಚ್ ಜನತಾ ಪಾರ್ಟಿಯ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಷರತ್ತುಬದ್ಧ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ. ಇವರಿಬ್ಬರ ಬಿಡುಗಡೆಯನ್ನು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸ್ವಾಗತಿಸಿದ್ದು, ಅವರು ತಮಗಿಂತಲೂ ದೊಡ್ಡ ನಾಯಕರು ಎಂದು ಬಣ್ಣಿಸಿದ್ದಾರೆ. ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾ ಸಿಂಗ್ ಈ ಬೆಳವಣಿಗೆಯನ್ನು ಸಂತೋಷದಿಂದ ಸ್ವಾಗತಿಸಿದ್ದು, ಈ ತೀರ್ಮಾನ ಬಹಳ ಹಿಂದೆಯೇ ಆಗಬೇಕಿತ್ತು ಎಂದು ತಿಳಿಸಿದ್ದಾರೆ. ಬಂಧನ ವಿಸ್ತರಣೆಗೆ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ಎಸ್‌ಇಎಂ ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಬಿಡುಗಡೆಗೊಂಡಿದ್ದಾರೆ.

ಹಂಚಿಕೊಳ್ಳಿ: