ನವದೆಹಲಿಯಲ್ಲಿ ಆರ್‌ಎಸ್‌ಎಸ್ ಕುರಿತು ರಾಹುಲ್ ಗಾಂಧಿ ಗಂಭೀರ ಆರೋಪ
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕೇವಲ ಪುರುಷರನ್ನೇ ಒಳಗೊಂಡಿರುವ ಸಂವಿಧಾನ ವಿರೋಧಿ ಗುಂಪಾಗಿದೆ. ಅದು ಮಹಿಳೆಯರನ್ನು ಪುರುಷರ ಆಸ್ತಿ ಎಂದು ಭಾವಿಸುತ್ತದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹು...

ರಾಷ್ಟ್ರೀಯ ಸ್ವಯಂಸೇವಕ ಸಂಘವು ಮಹಿಳೆಯರನ್ನು ಪುರುಷರ ಆಸ್ತಿಯಂತೆ ಕಾಣುವ ಸಂವಿಧಾನ ವಿರೋಧಿ ಸಂಸ್ಥೆಯಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಶಿವ-ಶಕ್ತಿ ತತ್ವದಲ್ಲಿ ನಂಬಿಕೆ ಇರುವುದರಿಂದಲೇ ಆರ್‌ಎಸ್‌ಎಸ್ ವಿರುದ್ಧ ಹೋರಾಡುವುದು ತಮಗೆ ಸಂತೋಷ ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಯುವಕರು ಮತ್ತು ಮಹಿಳೆಯರ ಮೇಲೆ ನಡೆದ ದಾಳಿಯ ವಿಚಾರದಲ್ಲಿ ಅಮಿತ್ ಶಾ ಅವರ ಅಧೀನದಲ್ಲಿರುವ ದೆಹಲಿ ಪೊಲೀಸರು ಗೂಂಡಾಗಿರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.




