ನವದೆಹಲಿಯಲ್ಲಿ ಭಾರತದ ಆಕ್ರೋಶ: ಗಡಿ ಗಸ್ತು ನಿಯಮ ಬದಲಿಸಿದ ಚೀನಾ
ನವದೆಹಲಿ: ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಗಡಿ ಪರಿಸ್ಥಿತಿಯಲ್ಲಿ ಉಂಟಾಗುವ ಅಶಾಂತಿಗೆ ಚೀನಾ ಪಡೆಗಳು ನಿಗದಿತ ಗಸ್ತು ಮಾದರಿಯಿಂದ ವಿಚಲಿತವಾಗುವುದೇ ಕಾರಣ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಗಡಿ ವಿ...

ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಚೀನಾ ಪಡೆಗಳು ತಮ್ಮ ಗಸ್ತು ನಡೆಸುವ ಕ್ರಮವನ್ನು ಬದಲಿಸುತ್ತಿರುವುದು ಗಡಿ ಭಾಗದಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಟೀಕಿಸಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಮುಖಾಮುಖಿ ಉಂಟಾಗಿದೆ ಎಂಬ ಐಟಿಬಿಪಿ ಮುಖ್ಯಸ್ಥ ಶತ್ರುಜೀತ್ ಕಪೂರ್ ಅವರ ಹೇಳಿಕೆಯು ರಾಜಕೀಯ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಈ ಪ್ರತಿಕ್ರಿಯೆ ಹೊರಬಿದ್ದಿದೆ. ಗಡಿಯಲ್ಲಿನ ಉದ್ವಿಗ್ನತೆಯನ್ನು ತಗ್ಗಿಸಲು ಮತ್ತು ತಪ್ಪು ತಿಳುವಳಿಕೆಗಳನ್ನು ನಿವಾರಿಸಲು ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಹಾಗೂ ಸೇನಾ ಮಟ್ಟದಲ್ಲಿ ಮಾತುಕತೆ ನಡೆಸುತ್ತಿವೆ. ಗಡಿ ಪ್ರದೇಶದಲ್ಲಿ ಶಾಂತಿ ನೆಲೆಸುವುದು ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಅತ್ಯಗತ್ಯ ಎಂದು ಭಾರತ ಪ್ರತಿಪಾದಿಸಿದೆ.




