ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ನವದೆಹಲಿಯಲ್ಲಿ ಗರ್ಭಿಣಿ ಪತ್ರಕರ್ತೆ ಮೇಲೆ ಹಲ್ಲೆ ಆರೋಪ: ರಾಹುಲ್ ಗಾಂಧಿ ವಿರುದ್ಧ ದೂರು

ಗರ್ಭಿಣಿ ಪತ್ರಕರ್ತೆ ರಿಚಾ ಪರಾಶರ್ ರಾಹುಲ್ ಗಾಂಧಿ ಹಾಗೂ ಅವರ ಅಂಗರಕ್ಷಕರ ವಿರುದ್ಧ ದೆಹಲಿ ಪೊಲೀಸರಿಗೆ ಹಲ್ಲೆ ಆರೋಪದ ದೂರು ನೀಡಿದ್ದಾರೆ. ಸುಪ್ರೀಂ ಕೋರ್ಟ್ ಬಳಿ ಘಟನೆ ನಡೆದಿದ್ದು, ತನ್ನ ಮೇಲೆ ದೈಹಿಕ ದೌರ್ಜನ್ಯ ನಡೆದಿ...

ಗರ್ಭಿಣಿ ಪತ್ರಕರ್ತೆ ಮೇಲೆ ರಾಹುಲ್ ಗಾಂಧಿ  ಹಲ್ಲೆ ಆರೋಪ: ದೆಹಲಿ ಪೊಲೀಸರಿಗೆ ದೂರು
ಹಂಚಿಕೊಳ್ಳಿ:

ನವದೆಹಲಿಯಲ್ಲಿ ಸುಪ್ರೀಂ ಕೋರ್ಟ್ ಬಳಿ ನಡೆದ ಇಂಡಿ ಒಕ್ಕೂಟದ ಪ್ರತಿಭಟನೆಯ ವೇಳೆ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಪತ್ರಕರ್ತೆ ರಿಚಾ ಪರಾಶರ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೂರು ತಿಂಗಳ ಗರ್ಭಿಣಿಯಾಗಿರುವ ತಾನು ರಾಹುಲ್ ಗಾಂಧಿ ಅವರ ಪ್ರತಿಕ್ರಿಯೆ ಪಡೆಯಲು ಕಾಯುತ್ತಿದ್ದಾಗ ಅವರು ಹಾಗೂ ಅವರ ಭದ್ರತಾ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಈ ಘಟನೆಯಲ್ಲಿ ತಾನು ಮೆಟ್ಟಿಲುಗಳ ಮೇಲೆ ಬಿದ್ದು ಗಾಯಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಈ ಆರೋಪಗಳನ್ನು ಕಾಂಗ್ರೆಸ್ ಸಂಪೂರ್ಣವಾಗಿ ನಿರಾಕರಿಸಿದ್ದು, ಬಿಜೆಪಿ ಈ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ದೆಹಲಿ ಪೊಲೀಸರು ಘಟನೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಹಂಚಿಕೊಳ್ಳಿ: