ನವದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ವಿಪಕ್ಷಗಳ ಸಾಂಕೇತಿಕ ಮಹಾಭಿಯೋಗ
ಚುನಾವಣಾ ಆಯೋಗದ ವಿರುದ್ಧ ತಮ್ಮ ಹೋರಾಟವನ್ನು ತೀವ್ರಗೊಳಿಸಿರುವ ಇಂಡಿಯಾ ಮೈತ್ರಿಕೂಟದ ನಾಯಕರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಇಂದು (ಶನಿವಾರ) ನವದೆಹಲಿಯಲ್ಲಿ ಸಾಂಕೇತಿಕ 'ಸಾರ್ವಜನಿಕ ಮಹಾಭಿಯೋಗ'...

ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಸಾಂಕೇತಿಕ ಮಹಾಭಿಯೋಗ ನಡೆಸುತ್ತಿವೆ. ಮಲ್ಲಿಕಾರ್ಜುನ ಖರ್ಗೆ ಈ ಪ್ರಸ್ತಾವನೆಯನ್ನು ಮಂಡಿಸಲಿದ್ದು, ಮೀರಾ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಒಟ್ಟು 21 ವಿರೋಧ ಪಕ್ಷಗಳ ನಾಯಕರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸಮಾರೋಪ ಭಾಷಣ ಮಾಡಲಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆಗೆ ಅವಕಾಶ ಸಿಗದ ಕಾರಣ ಖರ್ಗೆ ಅವರ ನಿವಾಸದಲ್ಲಿ ಈ ನಡಾವಳಿ ನಡೆಯುತ್ತಿದ್ದು, ನವೆಂಬರ್ 1ರಂದು ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ.




