ನವದೆಹಲಿಯಲ್ಲಿ ಪ್ರಧಾನಿ ಮೋದಿ ಕರೆ: ದೇಶದ ಯಶೋಗಾಥೆಗಳನ್ನು ಬಿಂಬಿಸಲು ಮಾಧ್ಯಮಗಳಿಗೆ ಮನವಿ
ನವದೆಹಲಿ: ದೇಶದ 'ಯಶೋಗಾಥೆಗಳನ್ನು ಪ್ರಚುರಪಡಿಸುವ ಕುರಿತು ಕೆಲಸ ಮಾಡುವಂತೆ' ಮಾಧ್ಯಮಗಳಿಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಕೆಲಸಗಳು ನಡೆಯುತ್ತಿವೆ ಎಂದು ಗುರುವಾರ ಹೇಳಿ...

ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ದೀಪಾವಳಿ ಮಿಲನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ಸಾಧನೆಗಳನ್ನು ಎತ್ತಿ ತೋರಿಸಿದರು. ಕಳೆದ ಹನ್ನೆರಡು ವರ್ಷಗಳಲ್ಲಿ ಐವತ್ತು ಕೋಟಿ ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ವಿಶ್ವಬ್ಯಾಂಕ್ ವರದಿಯನ್ನು ಉಲ್ಲೇಖಿಸಿ ತಿಳಿಸಿದರು. ಮಾಧ್ಯಮಗಳೊಂದಿಗಿನ ತಮ್ಮ ಹಳೆಯ ಒಡನಾಟವನ್ನು ನೆನಪಿಸಿಕೊಂಡ ಅವರು, ಪತ್ರಿಕಾ ಪ್ರಕಟಣೆಗಳಿಂದ ಹಿಡಿದು ಇಂದಿನ ಇನ್‌ಸ್ಟಾಗ್ರಾಂ ರೀಲ್ಸ್‌ವರೆಗೆ ಮಾಧ್ಯಮ ವಲಯದಲ್ಲಿ ಆಗಿರುವ ಬದಲಾವಣೆಗಳನ್ನು ಬಣ್ಣಿಸಿದರು. ದೇಶದ ಯಶಸ್ಸಿನ ಕಥೆಗಳನ್ನು ಜನರಿಗೆ ತಲುಪಿಸುವ ಜತೆಗೆ ಮಾದಕವಸ್ತುಗಳ ದುರುಪಯೋಗದ ವಿರುದ್ಧ ಜಾಗೃತಿ ಮೂಡಿಸುವಂತೆ ಅವರು ಪತ್ರಕರ್ತರಿಗೆ ಕರೆ ನೀಡಿದರು.




